ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.21
ಪ್ರತಿಭಟನೆಗೆ ನನ್ನ ವಿರೋಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ಆದರೆ ಈ ಪ್ರತಿಭಟನೆ ಅರಾಜಕತೆ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಹೇಳಿದರು.
ಅವರು ಮಂಗಳವಾರ ಮಾಧ್ಯಮಗಾರರೊಂದಿಗೆ ಮಾತನಾಡಿ, ದೆಹಲಿಯ ಜಂತರ್-ಮಂತರ್‌ನಲ್ಲಿ ಸೋನಂ ವಾಂಗ್ಚುಕ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಕೇವಲ ರಾಜಕಾರಣಕ್ಕಾಗಿದೆ. ಇದರ ಹಿಂದೆ ಕೆಲ ರಾಜಕಾರಣಿಗಳ ಷಡ್ಯಂತ್ರವಿದ್ದು, ಕೇಂದ್ರ ಸರ್ಕಾರವನ್ನು ದುರ್ಬಲಗೊಳಿಸುವ ಹುನ್ನಾರ ಈ ಪ್ರತಿಭಟನೆಯ ಹಿಂದಿದೆ ಎಂದರು.
ಗಮನಿಸಿ: ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ-ಜಿಲ್ಲೆಯ ಮೂವರು ಪತ್ರಕರ್ತರು ಭಾಜನ
ನೀಟ್ ಪರೀಕ್ಷೆಯಿಂದಾದ ಲೋಪದ ಬಗ್ಗೆ ಈಗಾಗಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಲ್ಲದೆ ಪ್ರತಿಭಟನಾಕಾರರ ಪ್ರಮುಖರನ್ನು ಕರೆದು ಕೇಂದ್ರ ಸಚಿವ ಜೆ.ಪಿ.ನಡ್ಡಾ ಕೂಡ ಮಾತುಕತೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್ ಮರು ಪರೀಕ್ಷೆಯನ್ನು ನಡೆಸಿಕೊಡಲಾಗಿದೆ ಎಂದರು.
ಪ್ರಧಾನಿ ಮೋದಿಯವರು ದುರ್ಬಲ ಹಾಗೂ ದುಷ್ಟ ರಕ್ಷಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಬಿ.ವೈ.ವಿಜಯೇಂದ್ರ ಬಲವಾಗಿ ಖಂಡಿಸಿ ತಾವು ಸಿಎಂ ಇದ್ದಾಗ ಧಾರಾವಾಡದಲ್ಲಿ ಎರಡೂವರೆ ಲಕ್ಷ ಪದವೀಧರರು ಬೀದಿಗಿಳಿದು ಹೋರಾಟ ಮಾಡಿದ ಸಂದರ್ಭದಲ್ಲಿ ಹುದ್ದೆ ಭರ್ತಿ ಮಾಡುವ ಆಶ್ವಾಸನೆ ಈಡೇರಿಸಿದ್ದೀರಾ ಎಂದು ಕಟುವಾಗಿ ಪ್ರಶ್ನಿಸಿದರು.
