ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜು.22
ಜಲಾಶಯಗಳಲ್ಲಿನ ನೀರಿನ ಕೊರತೆ ಹಿನ್ನೆಲೆಯಲ್ಲಿ “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಮುಖ್ಯಮಂತ್ರಿಗಳು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ಬಹುತೇಕ ಜಲಾಶಯಗಳಲ್ಲಿ ಒಳಹರಿವು ಶೂನ್ಯಕ್ಕೆ ಇಳಿದಿದ್ದು, ‘ಎಲ್ ನಿನೋ‘ ಪರಿಣಾಮದಿಂದ ಉಂಟಾಗಲಿರುವ ಬರ ಪರಿಸ್ಥಿತಿ ಕುರಿತು ಜುಲೈ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ, ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕಡ್ಡಾಯವಾಗಿ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಕಾಯ್ದಿರಿಸಬೇಕಾದ ಪರಿಸ್ಥಿತಿ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅಂಜನಾಪುರ ಮತ್ತು ಅಂಬ್ಲಿಗೋಳ ಜಲಾಶಯಗಳ ನೀರನ್ನು ನಂಬಿಕೊಂಡು ಯಾವುದೇ ಬೆಳೆಯನ್ನು ಬೆಳೆಯದಂತೆ ರೈತರಲ್ಲಿ ಮನವರಿಕೆ ಮಾಡಲು ಸೂಚಿಸಲಾಗಿದೆ.
ರೈತರು ಪ್ರಸ್ತುತ ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯದೆ, ನೀರಾವರಿ ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕಾಗಿ ಕಾರ್ಯಪಾಲಕ ಎಂಜಿನಿಯರ್‌ಗಳು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.
ಜಲಾಶಯಗಳಲ್ಲಿ ಒಳಹರಿವು ಶೂನ್ಯಕ್ಕಿಳಿದಿದ್ದು, ಬರ ಪರಿಸ್ಥಿತಿ ಎದುರಾಗಿದೆ.ಜಲಾಶಯದ ನೀರನ್ನು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದ್ದು ಅಂಜನಾಪುರ ಮತ್ತು ಅಂಬ್ಲಿಗೋಳ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಬೆಳೆ ಬೆಳೆಯದಂತೆ ಈ ಮೂಲಕ ಮನವಿ ಮಾಡಿದ್ದಾರೆ.
