Homeರಾಜ್ಯಮೋದಿ ನಿರ್ಗಮಿಸದೆ ಈ ದೇಶದ ಶಿಕ್ಷಣ ವ್ಯವಸ್ಥೆ ಸುಧಾರಣೆಯಾಗದು: ಸಿದ್ದರಾಮಯ್ಯ

ಮೋದಿ ನಿರ್ಗಮಿಸದೆ ಈ ದೇಶದ ಶಿಕ್ಷಣ ವ್ಯವಸ್ಥೆ ಸುಧಾರಣೆಯಾಗದು: ಸಿದ್ದರಾಮಯ್ಯ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.25

ಪ್ರಧಾನಿ ನರೇಂದ್ರ ಮೋದಿ ಅಧಿಕಾರದಿಂದ ನಿರ್ಗಮಿಸುವವರೆಗೆ ಈ ದೇಶದ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನೀಟ್ ಪರೀಕ್ಷೆ ಆಕ್ರಮ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಶನಿವಾರ ಜಯ ಸಂದಿದ್ದು, ಈ ಕುರಿತು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಗಮನಿಸಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ- ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಸಂದ ವಿಜಯ; ಸಿದ್ದರಾಮಯ್ಯ

ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು. ಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗಲಾರದು. ರಾಜಕೀಯದಿಂದ ಶಿಕ್ಷಣದ ವರೆಗೆ ಎಲ್ಲವನ್ನೂ ವ್ಯಾಪಾರೀಕರಣ ಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುವವರೆಗೆ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲಾರದು.

ಈ ಹಿನ್ನೆಲೆಯಲ್ಲಿ ಒಬ್ಬ ಅಸಮರ್ಥ ಮತ್ತು ಭ್ರಷ್ಟ ಸಚಿವನ ರಾಜೀನಾಮೆಗಾಗಿ ಸಂಭ್ರಮಾಚರಣೆ ಮಾಡದೆ, ದೇಶದ ವಿದ್ಯಾರ್ಥಿ-ಯುವಜನರು ಕೇಂದ್ರದಲ್ಲಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವ ವರೆಗೆ ವಿರಮಿಸಬಾರದು. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರ ಜೊತೆಗೆ ಇರುತ್ತದೆ ಎಂದು ‘ಎಕ್ಸ್’ ನಲ್ಲಿ ವಿದ್ಯಾರ್ಥಿ ಹೋರಾಟಕ್ಕೆ ಮತ್ತಷ್ಟು ಬೆಂಬಲ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments