Homeಜಿಲ್ಲೆಹೊರಗುತ್ತಿಗೆ ನೌಕರರಿಗೆ ಕನಿಷ್ಟ ವೇತನ ಆಗ್ರಹಿಸಿ ಅ.13 ರಂದು ಸಮಾವೇಶ

ಹೊರಗುತ್ತಿಗೆ ನೌಕರರಿಗೆ ಕನಿಷ್ಟ ವೇತನ ಆಗ್ರಹಿಸಿ ಅ.13 ರಂದು ಸಮಾವೇಶ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.29

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಆಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಸಂಚಾಲಕ ಎಂ.ಬಿ. ನಾಗಣ್ಣ ಗೌಡ ಹೇಳಿದರು.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಮೇ 22ರಂದು ರಾಜ್ಯ ಕಾರ್ಮಿಕ ಇಲಾಖೆ ಪರಿಷ್ಕೃತ ಕನಿಷ್ಠ ವೇತನದ ಆದೇಶ ಹೊರಡಿಸಿತ್ತು. ಆದರೆ ಇಲ್ಲಿಯವರೆಗೂ ಅದನ್ನು ಜಾರಿಗೆ ತರಲಾಗಿಲ್ಲ. ಹತ್ತು ವರ್ಷಗಳಿಂದ ವೇತನ ಹೆಚ್ಚಳವಾಗದೆ ನೌಕರರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಆ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯಮಟ್ಟದ ಆಗ್ರಹ ಸಮಾವೇಶ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ರಾಜ್ಯದಲ್ಲಿ ಸುಮಾರು 1.5ಲಕ್ಷ ಹೊರಗುತ್ತಿಗೆ ನೌಕರರು ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ 17,400 ವೇತನ ಮಾತ್ರ ಬರುತ್ತಿದೆ. ಪರಿಸ್ಕೃತ ವೇತನ ಜಾರಿಗೆ ಬಂದರೆ 28,500 ರೂ. ಆಗುತ್ತದೆ. ಆದ್ದರಿಂದ ಸರ್ಕಾರ ಮೀನಾಮೇಷ ಎಣಿಸದೆ ತಕ್ಷಣವೇ ಪರಿಷ್ಕöÈತ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಸಂಘದ ಗೌರವ ಅಧ್ಯಕ್ಷ ವೀರೇಶ್ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದಲೇ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಕನಿಷ್ಠವೇತನ ಜಾರಿಗೆ ವ್ಯತಿರಿಕ್ತ ಆದೇಶ ಹೊರಬಿದ್ದಲ್ಲಿ ಅದರ ಸಂಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ. ಕನಿಷ್ಠವೇತನ ಜಾರಿಗೊಳಿಸಲು ಕಾನೂನಿನ ಯಾವುದೇ ಅಡ್ಡಿಯಿಲ್ಲ. ಆದರೂ ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದಂತೆ ಕಾಣುತ್ತಿದೆ ಎಂದ ಅವರು, ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಇಲಾಖೆಗಳಿಂದ ಸಾವಿರಾರು ಹೊರಗುತ್ತಿಗೆ ನೌಕರರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಚಿನ್ನರಾಜು, ವೆಂಕಟಲಕ್ಷಿ÷್ಮ, ಎಂ.ಎನ್.ಚAದ್ರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments