Homeಜಿಲ್ಲೆತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.29

ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್. ಮಂಜುನಾಥ್ ಗೌಡರು ತಮ್ಮ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಬುಧವಾರ ಲೋಕಾರ್ಪಣೆ ಮಾಡಿದರು.

ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿಗಳಲ್ಲಿ ಒಂದಾದ ಕೊಣಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ.ಕೆ. ಸರ್ಕಲ್ ನಲ್ಲಿ ಆಟೋ ಚಾಲಕರ ಅನುಕೂಲಕ್ಕಾಗಿ ನಿರ್ಮಿಸಲಾದ ನೂತನ ಆಟೋ ನಿಲ್ದಾಣ, ಕೊಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಹಾಗೂ ದೇಬ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿಮಕ್ಕಿಯಲ್ಲಿ ಸಾರ್ವಜನಿಕರು, ರೋಗಿಗಳು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣ ಲೋಕಾರ್ಪಣೆ ಮಾಡಿದರು.

ಗಮನಿಸಿ: ಸಿದ್ದರಾಮಯ್ಯ ನಿವೃತ್ತಿ- ಕಾಂಗ್ರೆಸ್‌ಗೆ ಬಹುದೊಡ್ಡ ನಷ್ಟ: ಬಿ.ವೈ.ವಿಜಯೇಂದ್ರ

ಇದೇ ಸಂದರ್ಭದಲ್ಲಿ ದೇಮ್ಲಾಪುರ ಸರ್ಕಲ್ ನಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆಟೋ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ ನಂದೂರು, ಅಡಿಕೆ ವ್ಯಾಪಾರಿಗಳಾದ ಕೆ ಆರ್, ಪ್ರಕಾಶ್ ಗೌಡ ಕೆ ಆರ್, ಪ್ರಸಾದ್ ಗೌಡ, ಆಟೋ ಬಳಗದ ಅಧ್ಯಕ್ಷ ದೇವರಾಜ ಶೆಟ್ಟಿ , ಡಾ ಸುಂದರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಕಂಪ, ಸುರೇಶ್ ಹೊಸ್ಕೇರಿ, ಆದರ್ಶ್ ಹುಂಚದಕಟ್ಟೆ, ಲೋಕೇಶ್ ಕರಕುಚ್ಚಿ, ಹುಲ್ಲತ್ತಿ ದಿನೇಶ್, ಸುಕೇಶ್ ಕೊಣಂದೂರು, ಕುರುವಳ್ಳಿ ನಾಗರಾಜ್, ಸಚಿನ್ ಗೌಡ ವಿಶ್ವನಾಥ್ ರಕ್ಷೀತ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments