Homeಅಪರಾಧಲೈಂಗಿಕ ದೌರ್ಜನ್ಯ, ಜಾತಿ ನಿಂದನೆ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ

ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.30

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಎಸಗಿದ ಆರೋಪಿಗೆ ಲೈಂಗಿಕ ದೌರ್ಜನ್ಯ ಹಾಗೂ ಎಸ್ಸಿ ಎಸ್ಟಿ ಕಾಯ್ದೆಯಡಿ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

02-11-2023 ರಂದು ಶಿವಮೊಗ್ಗ ನಗರದ ಮನೆಯಲ್ಲಿ ನೊಂದ ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದಾಗ 27 ವರ್ಷದ ವ್ಯಕ್ತಿಯೊಬ್ಬನು ಮನೆಗೆ ಏಕಾಏಕಿ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ನಂತರ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದಾನೆ.

ಗಮನಿಸಿ: ರಾಜ್ಯ ಗೃಹ ಇಲಾಖೆ “ಫೇಸ್‌ಬುಕ್-ವ್ಯಾಟ್ಸಪ್” ಇಲಾಖೆಯಾಗಿದೆ: ಸುನೀಲ್ ಕುಮಾರ್

ಈ ಬಗ್ಗೆ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಎಸ್ಸಿ ಎಸ್ಟಿ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿಗಳಾದ ಡಿವೈಎಸ್ಪಿ ಸುರೇಶ್ ಎಂ. ಪ್ರಕರಣದ ತನಿಖೆ ಪೂರೈಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಈ ಪ್ರಕರಣ ಸಂಬಂಧಪಟ್ಟಂತೆ ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಪಿ.ಓ ಪುಷ್ಪಾ ವಾದ ಮಂಡಿಸಿದ್ದು, ಶಿವಮೊಗ್ಗದ ಘನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಪ್ರೀತಿ ಕೆ.ಪಿ. ಆರೋಪಿತನಿಗೆ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ಮತ್ತು ರೂ 20,000 ದಂಡವನ್ನು ವಿಧಿಸಿದ್ದು ಹಾಗೂ ನೊಂದ ಮಹಿಳೆಗೆ 15,000 ರೂ ಪರಿಹಾರ ನೀಡುವಂತೆ ಆದೇಶಿಸಿರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments