Homeಅಪರಾಧ37 ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

37 ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.30

ಡಕಾಯಿತಿ ಪ್ರಕರಣದಲ್ಲಿ ಕಳೆದ 37 ವರ್ಷದಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಂಡವು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

1989ನೇ ಸಾಲಿನಲ್ಲಿ ತೀರ್ಥಹಳ್ಳಿಯ ಮೃಗವಧೆ ಗ್ರಾಮದ ಗುಡ್ಡೆ ಕೊಪ್ಪದಲ್ಲಿ ನಡೆದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆ ಗುನ್ನೆ ನಂ: 63/1989 ಕಲಂ:- 395 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿತ್ತು. ಮಂಗಳೂರಿನ ಪೆರ್ರ ಬಜ್ಪೆಯ 57 ವರ್ಷದ ಆರೋಪಿ ಅಬ್ದುಲ್ ಖಾದರ್ @ ಮೊಣು ಕಳೆದ 37 ವರ್ಷಗಳಿಂದ ತಲೆಮರಿಸಿಕೊಂಡಿದ್ದನು.

ಗಮನಿಸಿ: ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ

ಈ ಆರೋಪಿಯ ಪತ್ತೆಗೆ ಶಿವಮೊಗ್ಗ ಎಸ್ಪಿ ನಿಖಿಲ್ ಬಿ, ಎಎಸ್‌ಪಿ ಕಾರ್ಯಪ್ಪ ಎ.ಜಿ, ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಕಲಗುಚ್ಚಿ ಇವರ ಮಾರ್ಗದರ್ಶನದಲ್ಲಿ ಹಾಗೂ ಮಾಳೂರಿನ ಠಾಣೆ ಸಿಪಿಐ ರಾಜಶೇಖರ್ ಹಾಗೂ ಪಿಎಸ್‌ಐಸುನಿಲ್ ಬಿ.ಸಿ ನಿರ್ದೇಶನದಲ್ಲಿ ಠಾಣೆ ಸಿಬ್ಬಂದಿಗಳಾದ ಮೇಘರಾಜ್ ಮತ್ತು ಅಭಿಲಾಶ ಇವರುಗಳು ಆರೋಪಿಯು ತಲೆ ಮರೆಸಿಕೊಂಡು ಕೇರಳದ ಮಂಜೇಶ್ವರ ತಾಲೂಕಿನ ಪಾಡಿ, ಪುರ ಸಂಗೋಡಿ, ವರ್ಕಾಡಿ ಗ್ರಾಮ ವಾಸವಾಗಿರುವ ಬಗ್ಗೆ ಮಾಹಿತಿ ಪಡೆದು ಪತ್ತೆ ಮಾಡಿ, ದಸ್ತಗಿರಿ ಮಾಡಿಕೊಂಡು ಬಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಶಿವಮೊಗ್ಗ ಸತ್ರ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments