Homeರಾಜ್ಯ‘ಶುದ್ದೀಕರಣ’ ಬಿಜೆಪಿ-ಆರ್‌ಎಸ್‌ಎಸ್ ನಿಜವಾದ ಮುಖ ಬಯಲಾಗಿದೆ

‘ಶುದ್ದೀಕರಣ’ ಬಿಜೆಪಿ-ಆರ್‌ಎಸ್‌ಎಸ್ ನಿಜವಾದ ಮುಖ ಬಯಲಾಗಿದೆ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.13

ದಲಿತರು, ಹಿಂದುಳಿದ ವರ್ಗಗಳು ಮತ್ತು ಆದಿವಾಸಿಗಳನ್ನು ಹೊರಗಿಟ್ಟು ‘ವಿಕಸಿತ ಭಾರತ’ ವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಿದ್ದಾರೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಶುದ್ದೀಕರಣ ಮಾಡಿದ್ದು, ಪ್ರಿಯಾಂಕ್ ಖರ್ಗೆ ಗುರುವಾರ ತಮ್ಮ ‘ಎಕ್ಸ್’ ಖಾತೆಯಲ್ಲಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ವಿರುದ್ದ ಕಿಡಿಕಾರಿದ್ದಾರೆ.

ಗಮನಿಸಿ: ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಗ್ರಾಮಸ್ಥರಿಂದ ಅಭಿನಂದನೆ

ಹಲ್ದ್ವಾನಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರ ಭಾಷಣದ ನಂತರ, ಆ ಸ್ಥಳದಲ್ಲಿ ‘ಶುದ್ಧೀಕರಣ’ ಮಾಡಿದ್ದು, ಇದರಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಿಜವಾದ ಮುಖ ಬಯಲಾಗಿದೆ.

50 ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಸೇವೆಯಲ್ಲಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ‘ಶುದ್ಧೀಕರಿಸುವ’ ಅಗತ್ಯವಿದೆ ಎಂದು ಭಾವಿಸಿದ್ದಿರ ಎಂದರೆ, ಇನ್ನು ಪ್ರತಿದಿನ ಜಾತಿ ತಾರತಮ್ಯವನ್ನು ಎದುರಿಸುವ ಲಕ್ಷಾಂತರ ದಲಿತ ಪಾಡೆನು. ಅವರಿಗೆ ಈ ಮೂಲಕ ಯಾವ ಸಂದೇಶ ರವಾನೆಯಾಗುತ್ತದೆ ಎಂಬುದನ್ನು ಊಹಿಸಿಕೊಳ್ಳಿ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತ್ರವಲ್ಲ, ಸಮಾನತೆ, ಘನತೆ ಮತ್ತು ಸಾಮಾಜಿಕ ನ್ಯಾಯದ ಬಗ್ಗೆಯೂ ಸಮಸ್ಯೆಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments