ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.17
ಶಿಕಾರಿಪುರದಲ್ಲಿ ನಡೆದಂತಹ ಬಜರಂಗದಳದ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19 ರಂದು ಸ್ವಯಂ ಪ್ರೇರಿತ ಶಿಕಾರಿಪುರ ಬಂದ್‌ಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕರೆ ನೀಡಿದೆ ಮತ್ತು ಇದರ ವಿರುದ್ದ ಶಿಕಾರಿಪುರದಲ್ಲಿ ಉಗ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಹಿಂಪ ವಿಭಾಗ ಸಹ ಕಾರ್ಯದರ್ಶಿ ರಾಜೇಶ್ ಗೌಡ ತಿಳಿಸಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲಾದ್ಯಾಂತ ಗೋ ಕಳ್ಳತನ ಹೆಚ್ಚಾಗುತ್ತಿದೆ. ಹೊಸನಗರ ತಾಲ್ಲೂಕಿನ ಹರತಾಳು ಗ್ರಾಮದಲ್ಲಿ ಆ.16 ರ ಬೆಳಗಿನ ಜಾವ ಗೋ ಕಳ್ಳತನ ನಡೆದಿದೆ. ತಡ ರಾತ್ರಿ ಬಂದ ಕಳ್ಳರು ಕೊಟ್ಟಿಯಲ್ಲಿ ಕಟ್ಟಿದ ಜಾನುವಾರುಗಳನ್ನು ವಾಹನಕ್ಕೆ ತುಂಬಿಕೊಂಡಿದ್ದು, ಪರಾರಿಯಾಗಲು ಯತ್ನಿಸಿದರು. ಜಾನುವಾರ ಸದ್ದು ಕೇಳಿ ಎಚ್ಚೆತ್ತ ಮನೆಯವರು ಜಗರಂಗದ ದಳದ ಕಾರ್ಯಕರ್ತರಿಗೆ ಮಾಹಿತಿ ನೀಡಿದರು.
ಗಮನಿಸಿ: ಬಿವೈಆರ್ ಹಾರ ತುರಾಯಿ, ಪ್ಲೆಕ್ಸ್ ಗಳಿಗೆ ಸಿಮೀತವಾಗದ ರಾಜಕಾರಣಿ : ಆರಗ ಜ್ಞಾನೇಂದ್ರ
ಮಾಹಿತಿ ಮೇರೆಗೆ ಕಾರ್ಯಕರ್ತರು ಕಾರ್ಯೊನ್ಮೂಕರಾಗಿ ತಮ್ಮ ಕಾರಿನಲ್ಲಿ ಕಳ್ಳರ ವಾಹನವನ್ನು ಹಿಂಬಾಲಿಸಿದ್ದಾರೆ. ಗೋ ಕಳ್ಳರ ಗುಂಪು ಮಾರ್ಗ ಮಧ್ಯೆ ತಮ್ಮ ಇನ್ನೊಂದು ವಾಹನವನ್ನು ಕರೆಸಿಕೊಂಡು ಪೂರ್ವ ನಿಯೋಜಿತವಂತೆ ಕಾರ್ಯಕರ್ತರ ಕಾರಿಗೆ ತಮ್ಮ ವಾಹನದಿಂದ ಬಲವಾಗಿ ಡಿಕ್ಕಿ ಹೊಡೆದಿದ್ದಾರೆ. ಈ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಿಂದ ಇಳಿದ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಕಾರ್ಯಕರ್ತರಿಗೆ ತೀವ್ರ ಗಾಯಗಳಾಗಿವೆ. ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೂಟಲೇ ಗೋ ಕಳ್ಳರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದರು.
ವಿಶ್ವ ಹಿಂದೂ ಪರಿಷತ್‌ನ ಜಿಲ್ಲೆಯಾದ ಸಾಗರದ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ಮಾತನಾಡಿ, ಸಾಗರ ವಿಭಾಗವೂ ಸೇರಿದಂತೆ ಗೋಗಳ್ಳರ ಸಂಖ್ಯೆ ಹೆಚ್ಚುತ್ತಿದೆ. ಕೇವಲ ಗೋವುಗಳನ್ನು ಕಳ್ಳತನ ಮಾಡಿಕೊಂಡು ಹೋಗುವುದು ಮಾತ್ರವಲ್ಲದೆ ಇದನ್ನು ತಡೆಯಲು ಹೋದ ನಮ್ಮ ಕಾರ್ಯಕರ್ತರ ಮೇಲೆ ಮಾರಣಾಂತಿ ಹಲ್ಲೆ ನಡೆಸುತ್ತಿದ್ದಾರೆ. ಈ ಬಗ್ಗೆ ದೂರು ಕೊಟ್ಟರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಸರ್ಕಾರದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ ಹಾಗಾಗಿ ತಕ್ಷಣವೇ ಅಕ್ರಮ ಗೋಸಾಗಾಣಿಕದಾರರನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದರು.
ಶಿಕಾರಿಪುರದ ಬಂದ್‌ಗೆ ಅಲ್ಲಿನ ಶಾಸಕರ ಬೆಂಬಲವೂ ಕೂಡ ಇದೆ. ಅವರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಶಿಕಾರಿಪುರದ ವರ್ತಕರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಮುಗ್ಗಟ್ಟುಗಳನ್ನು ಬಂದ್ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ಪ್ರಾಂತೀಯ ಸಾಮರಸ್ಯ ಪ್ರಮುಖ್ ರಮೇಶ್ ಬಾಬು, ಬಜರಂಗದಳದ ಜಿಲ್ಲಾ ಸಂಯೋಜಕ್ ಸಂತೋಷ್ ಶಿವಾಜಿ, ಪ್ರಮುಖರಾದ ನವೀನ್, ಯೋಗೀಶ್, ಸೋಮಶೇಖರ್, ಕೀರ್ತಿ ಇದ್ದರು.
