Homeಅಪರಾಧಪ್ರೀತಿ ಹೆಸರಿನಲ್ಲಿ ಕಿರುಕುಳ ಡೆತ್‌ನೋಟ್‌ ಬರೆದಿಟ್ಟು ಯುವತಿ ಸಾವು !?

ಪ್ರೀತಿ ಹೆಸರಿನಲ್ಲಿ ಕಿರುಕುಳ ಡೆತ್‌ನೋಟ್‌ ಬರೆದಿಟ್ಟು ಯುವತಿ ಸಾವು !?

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.23

ಪ್ರೀತಿ ಹೆಸರಿನಲ್ಲಿ ನೀಡುತ್ತಿದ್ದ ಕಿರುಕುಳ ತಾಳಲಾರದೆ ಶಿವಮೊಗ್ಗದ ಸಾಗರ ತಾಲ್ಲೂಕಿನ ಬೆಳಮಕ್ಕಿ ಮೂಲದ ವಾಣಿಶ್ರೀ(22) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಂಗಳೂರಿನಲ್ಲಿ ನಡೆದಿದೆ.

ಸಹಪಾಠಿಯೊಬ್ಬ ಪ್ರೀತಿ ಹೆಸರಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಾ ಬ್ಲಾಕ್ ಮೇಲ್ ಮಾಡುತ್ತಿದ್ದ ಇದರಿಂದ ಬೆಸತ್ತು ಬೆಂಗಳೂರಿನ ಎಚ್‌ಎಸ್‌ಆರ್ ಲೇ ಔಟ್‌ನಲ್ಲಿರುವ ಅಗ್ರ ಕೆರೆಗೆ ಹಾರಿ ಯುವತಿ ಕೊನೆಗೊಳಿಸಿದ್ದಾಳೆ. ಸುಮಾರು ಒಂದು ವರ್ಷದ ಹಿಂದೆ ವಾಣಿ ಉದ್ಯೋಗ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದು, ನಗರದ ಪ್ರಸಿದ್ಧ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ಸ್ವಾವಲಂಬಿ ಜೀವನ ನಡೆಸುತ್ತಿದ್ದಳು.

ಗಮನಿಸಿ: ಅಂಗಾಂಗ ದಾನವು ಮಾನವೀಯತೆಯ ಮಹತ್ವ ಸೇವೆ: ಡಾ. ಕೃಷ್ಣ

ಈಕೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‌ನೋಟ್ ಬರೆದಿದ್ದು, ಅದರಲ್ಲಿ ನನ್ನ ಸಾವಿಗೆ ಆಲೂರು ಸ್ವಾಮಿ ಅವರ ಪುತ್ರ ಅಭಿಷೇಕ್ ಎಂಬಾತನೇ ನೇರ ಕಾರಣ ಎಂದು ಉಲ್ಲೇಖಿಸಿದ್ದಾಳೆ.

ಕಾಲೇಜು ದಿನಗಳಲ್ಲಿ ವಾಣಿಶ್ರೀ ಹಾಗೂ ಆರೋಪಿ ಅಭಿಷೇಕ್ ಸ್ನೇಹದಲ್ಲಿದ್ದರು. ಅದನ್ನೆ ಇಟ್ಟುಕೊಂಡು ಅಭಿಷೇಕ್, ಯುವತಿಯ ವಾಟ್ಸಾಪ್‌ಗೆ ಹಳೆಯ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದ್ದು, ರೂಮಿಗೆ ಬಾ ಎಂದು ವಿಕೃತವಾಗಿ ಪೀಡಿಸುತ್ತಿದ್ದ ಎಂದು ಯುವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾಳೆ.

ನಮ್ಮ ಕುಟುಂಬದ ಮರ್ಯಾದೆ ಹೋಗುತ್ತದೆ..

ಅಭಿಷೇಕ್ ನೀಡುತ್ತಿದ್ದ ಮಾನಸಿಕ ಹಿಂಸೆಯನ್ನು ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಷಯ ಹೊರಬಂದರೆ ತನ್ನ ಕುಟುಂಬದ ಮರ್ಯಾದೆ ಹರಾಜಾಗುತ್ತದೆ ಎಂಬ ಭೀತಿಯಿಂದ ಯುವತಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ. “ನನ್ನ ಸಾವಿಗೆ ಕಾರಣನಾದ ಅಭಿಷೇಕ್‌ಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಡೆತ್ ನೋಟ್‌ನಲ್ಲಿ ಯುವತಿ ಆಕ್ರೋಶ ಹೊರಹಾಕಿದ್ದಾಳೆ.

ಘಟನಾ ಸ್ಥಳಕ್ಕೆ ಧಾವಿಸಿದ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಯುವತಿಯ ಮೃತದೇಹವನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಲಭ್ಯವಿರುವ ಡೆತ್ ನೋಟ್ ಹಾಗೂ ಮೊಬೈಲ್ ಚಾಟ್‌ಗಳ ಆಧಾರದ ಮೇಲೆ ತಲೆಮರೆಸಿಕೊಂಡಿರುವ ಆರೋಪಿ ಅಭಿಷೇಕ್ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments