Homeಜಿಲ್ಲೆಪ್ರವಾದಿ ಮುಹಮ್ಮದ್(ಸ) ಸಂದೇಶ ಪರಿಚಯಿಸಲು ಸೀರತ್ ಅಭಿಯಾನ

ಪ್ರವಾದಿ ಮುಹಮ್ಮದ್(ಸ) ಸಂದೇಶ ಪರಿಚಯಿಸಲು ಸೀರತ್ ಅಭಿಯಾನ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.24

ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮ ದಿನದ ಅಂಗವಾಗಿ ಆಗಸ್ಟ್ 26 ರಿಂದ ಸೆಪ್ಟೆಂಬರ್ 6 ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ನ ಜಿಲ್ಲಾ ಸಂಚಾಲಕ ಅಕ್ರಮುಲ್ಲಾ ಶರೀಫ್ ತಿಳಿಸಿದರು.

ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಅಭಿಯಾನ ನಡೆಯಲಿದೆ ಎಂದರು.

ಪ್ರವಾದಿ ಮುಹಮ್ಮದ್(ಸ) ಅವರು ಜಗತ್ತಿಗೆ ನೀಡಿದ ಸಂದೇಶವು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯನ್ನು ಆಧರಿಸಿತ್ತು. ಅವರ ಸಂದೇಶಗಳು ವ್ಯಕ್ತಿಯ ನೈತಿಕತೆ ಹಾಗೂ ಚಾರಿತ್ರ್ಯವನ್ನು ಶುದ್ಧೀಕರಿಸುವ ಮೂಲಕ ಸಮಾಜ ಪರಿವರ್ತನೆಗೆ ಕಾರಣವಾದವು. ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತ ಸೇರಿದಂತೆ ಮಾನವ ಜೀವನದ ವಿವಿಧ ಕ್ಷೇತ್ರಗಳಿಗೆ ಅವರ ಚಿಂತನೆಗಳು ಮಾರ್ಗದರ್ಶನ ನೀಡಿವೆ ಎಂದು ಹೇಳಿದರು.

ಗಮನಿಸಿ: ಖರ್ಗೆ ಅವರಿಗೆ ಅವಮಾನ: ಪೈಶಾಚಿಕ ಕೃತ್ಯ, ಮೋದಿ -ಷಾ ಕ್ಷಮೆಗೆ ಎನ್.ರಮೇಶ್ ಅಗ್ರಹ

ಪ್ರವಾದಿ ಮುಹಮ್ಮದ್(ಸ) ಅವರ ಸಂದೇಶವನ್ನು ಕನ್ನಡ ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಹಾಗೂ ಪರಸ್ಪರ ಬಾಂಧವ್ಯ ಮತ್ತು ಸೌಹಾರ್ದವನ್ನು ಬಲಪಡಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.

ವೈಯಕ್ತಿಕ ಭೇಟಿ, ವಿಚಾರಗೋಷ್ಠಿ, ಸಾರ್ವಜನಿಕ ಸಮಾವೇಶ, ಸಂವಾದ, ಚರ್ಚಾಗೋಷ್ಠಿ, ಸೀರತ್ ಪ್ರವಚನ, ಸೀರತ್ ಪ್ರದರ್ಶನ, ಸಮಾಜಸೇವಾ ಚಟುವಟಿಕೆ, ಸೌಹಾರ್ದ ಸಂದೇಶ ರ್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದಲ್ಲಿಯೂ ಸೀರತ್ ಸಂವಾದ, ವಿಚಾರಗೋಷ್ಠಿ, ಗೆಟ್-ಟುಗೆದರ್, ಅಂತರ್ಧರ್ಮೀಯ ಸಂವಾದ, ಪ್ರಬಂಧ ಸ್ಪರ್ಧೆ, ರಕ್ತದಾನ ಶಿಬಿರ, ಆಸ್ಪತ್ರೆ ಹಾಗೂ ವೃದ್ಧಾಶ್ರಮಗಳ ಭೇಟಿ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ.

ಇದೇ ಸಂದರ್ಭದಲ್ಲಿ ಅಭಿಯಾನದ ಅಂಗವಾಗಿ ಸಾಹಿತಿ ಯೋಗೇಶ್ ಮಾಸ್ಟರ್ ರಚಿಸಿರುವ ‘ಮಾನವ ಮನಸ್ಸಿನ ಕೃಷಿಕ – ಮನದೊಡೆಯ ಪ್ರವಾದಿ ಮುಹಮ್ಮದ್(ಸ)’ ಹಾಗೂ ವಾರ್ತಾ ಭಾರತಿಯ ಪ್ರಧಾನ ಸಂಪಾದಕ ಅಬ್ದುಲ್ ಸಲಾಂ ಪುತ್ತಿಗೆ ಅವರ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)’ ಕೃತಿಗಳನ್ನು ಪ್ರಮುಖರಾದ ಎಸ್.ಬಿ. ಅಶೋಕ್ ಕುಮಾರ್ ರಾಜ್ಯಾದ್ಯಂತ ಬಿಡುಗಡೆ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಸಂಚಾಲಕ ಮೌಲಾನಾ ಸಲೀಂ ಉಮರಿ ಹಾಗೂ ಜಿಲ್ಲಾ ಅಧ್ಯಕ್ಷ ಅಬ್ದುಲ್ ವಹಾಬ್, ಪ್ರೊಫೆಸರ್ ರಾಚಪ್ಪ, ಎಸ್. ಪಿ.ಶೇಷಾದ್ರಿ, ವಕೀಲರು ಜನಾಬ್ ಸೈಯದ್ ಲಿಯಾ ಕಾತ್, ಬಾಬು ಅಲಿ ಖಾನ್ ಮುಂತಾದರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments