ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಆ.25
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಜಿಲ್ಲಾ ನೂತನ ನಿರ್ದೇಶಕರಾಗಿ 5 ವರ್ಷದ ಅವಧಿಗೆ ಭದ್ರಾವತಿಯ ಬಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಗಮನಿಸಿ: ಕೆಪಿಸಿಸಿ ರಾಜ್ಯ ಸಂಯೋಜಕನಾಗಿ ಸಿ.ಜಿ.ಮಧುಸೂದನ್ ಆಯ್ಕೆ
ಆ.25 ರಂದು ನಿರ್ದೇಶಕರಾಗಿ ಬಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಜಿಲ್ಲೆಯ ಎಲ್ಲಾ ಸಹಕಾರ ಸಂಘ–ಸಂಸ್ಥೆಗಳು ಮತ್ತು ಬ್ಯಾಂಕುಗಳ ಪರವಾಗಿ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿ, ನೂತನ ಜವಾಬ್ದಾರಿಯಲ್ಲಿ ಯಶಸ್ಸು ಸಾಧಿಸಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿ ಎಂದು ಹಾರೈಸಿದ್ದಾರೆ.
