ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.31
ಲಜ್ಜೆಗೆಟ್ಟ ಮಾನಸಿಕತನ ಇದ್ದವರು ಮಾತ್ರ ಇಸ್ಲಾಂ ಧರ್ಮವೇ ಶ್ರೇಷ್ಠ ಎಂಬ ಹೇಳಿಕೆ ನೀಡುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿರುದ್ದ ಶಾಸಕ ಎಸ್.ಎನ್.ಚನ್ನಬಸಪ್ಪ ಕಿಡಿಕಾರಿದರು.
ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ ರಾಯರೆಡ್ಡಿ ರಾಜಕೀಯದಲ್ಲಿ ಬಹಳ ಹಿರಿಯರು ಆದರೆ ಇಂತಹ ಹೇಳಿಕೆ ನೀಡುವುದು ಅವರ ಹಿರಿತನಕ್ಕೆ ಶೋಭೆ ತರುವುದಿಲ್ಲ. ಇಂತಹ ಹೇಳಿಕೆಗಳಿಂದ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದರು.
ಗಮನಿಸಿ: ಕರ್ನಾಟಕದಲ್ಲಿ ಬಿಜೆಪಿ ನಶಿಸುತ್ತಿದೆ: ಕೆ.ಎಸ್.ಈಶ್ವರಪ್ಪ
ಸಚಿವ ಬಸವರಾಜ ರಾಯರೆಡ್ಡಿ ಹಿಂದೂ ಧರ್ಮಕ್ಕಿಂತ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದಿರುವುದು ಓಲೈಕೆ ರಾಜಕಾರಣ ಹೊರತು ಬೇರೆನಲ್ಲಾ. ಕಾಂಗ್ರೆಸ್‌ನ ಒಬ್ಬೊಬ್ಬ ನಾಯಕರು ಒಂದೊಂದು ರೀತಿಯಲ್ಲಿ ವರ್ತನೆ ಮಾಡುತ್ತಾರೆ. ವೋಟ್ ಬ್ಯಾಂಕ್ ರಾಜಕಾರಣಕೋಸ್ಕರ ಇಂತಹ ಹೇಳಿಕೆಯನ್ನು ನೀಡುತ್ತಾರೆ ಎಂದು ಕಿಡಿಕಾರಿದರು.
ಹಿಂದೂ ಧರ್ಮದಲ್ಲಿ ಹುಟ್ಟಿದವರಿಗೆ ಹಿಂದೂ ಧರ್ಮವೇ ಶ್ರೇಷ್ಠವಾಗಿರಬೇಕು. ಆದರೆ ಕಾಂಗ್ರೆಸ್ ನಾಯಕರಿಗೆ ಇಸ್ಲಾಂ ಧರ್ಮವೇ ಶ್ರೇಷ್ಠವಾಗಿದೆ. ಹಾಗಾದರೆ ಅವರು ಮೆಕ್ಕಾ, ಮದೀನಾಕ್ಕೆ ಹೋಗಲಿ. ಬಸವರಾಜ ರಾಯರೆಡ್ಡಿ ಹಜ್ ಯಾತ್ರೆಗಾದರೂ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
