Homeಅಪರಾಧಲಂಚ ಪ್ರಕರಣ: ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು

ಲಂಚ ಪ್ರಕರಣ: ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಸೆ.01

ಹುಟ್ಟು ಮೂಕನಾಗಿರುವ ತಂದೆಗೆ ಅಂಗವಿಕಲರ ವೇತನ ಕೊಡಿಸಲು ರೂ.10,000 ಲಂಚಕ್ಕೆಬೇಡಿಕೆಯಿಟ್ಟು, ಮುಂಗಡವಾಗಿ ರೂ.5,000 ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಭದ್ರಾವತಿತಾಲೂಕಿನ ಕಲ್ಲಿಹಾಳ್‌ ನಾಡ ಕಚೇರಿಯ ಉಪ ತಹಶೀಲ್ದಾರ್‌ ಪುಷ್ಪಲತಾ ಅವರಿಗೆ ಶಿವಮೊಗ್ಗದ 1 ನೇಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 4 ವರ್ಷಗಳ ಸಜೆ ಮತ್ತು 40,000 ದಂಡ ವಿಧಿಸಿ ತೀರ್ಪು ನೀಡಿದೆ.

ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿಯ ನಿವಾಸಿ ಗಿರೀಶ್‌ ಎಂಬುವರು ತಮ್ಮ ಹುಟ್ಟು ಮೂಕ ತಂದೆಗೆ ಅಂಗವಿಕಲರ ಪಿಂಚಣಿ ಸೌಲಭ್ಯ ಪಡೆಯಲು ಕಲ್ಲಿಹಾಳ್‌ ನಾಡ ಕಚೇರಿಗೆ ತೆರಳಿದ್ದಾಗ, ಉಪ ತಹಶೀಲ್ದಾರ್‌ ಪುಷ್ಪಲತಾ ಅವರು ರೂ.10,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಗಮನಿಸಿ: ಮಾಡಿದ ಪಾಪ ತೊಳೆದುಕೊಳ್ಳಲು ಬಿಜೆಪಿಯವರ ಪಾದಯಾತ್ರೆ: ಸಚಿವ ಮಧು

ಬಗ್ಗೆ ಗಿರೀಶ್‌ ಅವರು ನೀಡಿದ ದೂರಿನನ್ವಯ 2017 ಸೆಪ್ಟೆಂಬರ್ 21 ರಂದು ಭದ್ರಾವತಿ ತಾಲೂಕು ಕಚೇರಿಯಲ್ಲಿ ಗಿರೀಶ್‌ ಅವರಿಂದ ರೂ.5,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದರು.

ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಹೆಚ್.ಎಸ್.ತಿಪ್ಪೇಸ್ವಾಮಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂವಿಶೇಷ ನ್ಯಾಯಾಲಯವು 2026 ಸೆಪ್ಟೆಂಬರ್ 1 ರಂದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ.

ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರ್‌ ರಾಜ್‌ ಅವರು ವಾದ ಮಂಡಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments