Homeರಾಜ್ಯನಾಳೆ ‘ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಅಂಬೇಡ್ಕರ್ ದೃಷ್ಟಿಕೋನ' ಕಿರು ಹೊತ್ತಿಗೆ ಬಿಡುಗಡೆ

ನಾಳೆ ‘ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಅಂಬೇಡ್ಕರ್ ದೃಷ್ಟಿಕೋನ’ ಕಿರು ಹೊತ್ತಿಗೆ ಬಿಡುಗಡೆ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಸೆ.16

ಕರ್ನಾಟಕ ರಾಜ್ಯ ಎಸ್ಸಿ / ಎಸ್ಟಿ ಪತ್ರಿಕಾ ಸಂಪಾದಕರ ಸಂಘ (ರಿ.), ಬೆಂಗಳೂರು ವತಿಯಿಂದ ಸೆಪ್ಟೆಂಬರ್ 17 ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿರುವ ಸರ್ಕಾರಿ ನೌಕರರ ಸಭಾ ಭವನದಲ್ಲಿ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ ಟೆಲೆಕ್ಸ್ ಅವರು ಬರೆದಿರುವ ‘ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಅಂಬೇಡ್ಕರ್ ದೃಷ್ಟಿಕೋನ’ ಕಿರು ಹೊತ್ತಿಗೆ ಬಿಡುಗಡೆ ಹಾಗೂ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ರವಿಕುಮಾರ್ ಅವರ ಕೊಡುಗೆಗಾಗಿ ಗೌರವಿಸಿ ಸನ್ಮಾನಿಸಲಾಗುವುದು.

ಈ ಕಿರು ಹೊತ್ತಿಗೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಬಿಡುಗಡೆಗೊಳಿಸಲಿದ್ದು, ಈ ಕಿರು ಹೊತ್ತಿಗೆ ಸುದ್ದಿಮಾಧ್ಯಮದಲ್ಲಿ ಅಂಬೇಡ್ಕರ್ ಚಿಂತನೆಗಳು ಹೇಗೆ ಪ್ರತಿಫಲಿಸಬೇಕು ಎಂಬುದರ ಕುರಿತು ವಿಶ್ಲೇಷಿಸಲಾಗಿದೆ.

ಸಂಘದ ಅಧ್ಯಕ್ಷ ಚೆಲುವರಾಜು ಮತ್ತು ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಅವರು ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments