ಬೆಂಗಳೂರು,ಸೆ.2: ಅರಮನೆ ಮೈದಾನದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ, ಬಸವ ಪರಿಷತ್ವತಿಯಿಂದ ಆಯೋಜಿಸಲಾಗಿದ್ದ ಬಸವ ಪುರಸ್ಕಾರ – 2026 ಪ್ರಶಸ್ತಿ ಪ್ರದಾನ ಸಮಾರಂಭವು ಮಹಾಜಗದ್ಗುರು ಡಾ. ಮಾತೆ ಗಂಗಾದೇವಿ ಅವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ಸಂಘಟನೆ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ರಾಜ್ಯಾಧ್ಯಕ್ಷರಾದ ಸಿ. ಎಸ್. ಷಡಾಕ್ಷರಿಯವರಿಗೆ ಪ್ರತಿಷ್ಠಿತ “ಬಸವ ಪುರಸ್ಕಾರ – 2026” ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ನೌಕರರ ಹಿತಾಸಕ್ತಿ, ಸಂಘಟನಾ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆಯ ಮೂಲಕ ಸಲ್ಲಿಸಿರುವ ಗಮನಾರ್ಹ ಕೊಡುಗೆಗೆ ಸಂದ ಈ ಗೌರವವು ಸೇವಾ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ.
ಈ ಗೌರವದ ಕ್ಷಣದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ್ ಬೊಮ್ಮಾಯಿ, ಶಾಸಕರಾದ ಶರವಣ, ಬಸವ ಪರಿಷತ್ ಅಧ್ಯಕ್ಷರಾದ ರೇಖಾ ಮಹಾಂತೇಶ, ಗೌರವಾಧ್ಯಕ್ಷರಾದ ಉಮಾದೇವಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
