ಶಿವಮೊಗ್ಗ, ಮಾ.20: ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ ವ್ಯಕ್ತಿಗಳಿಗೆಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದಈಗಾಗಲೇ ಎಫ್ ಐ ಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇಂತಹವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ ಖಾಸಗಿವ್ಯಕ್ತಿಗಳಿಂದ ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಸಾಗರತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಆರು ಜನಆರೋಪಿಗಳ ವಿರುದ್ದ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ವಿಚಾರಣೆಆರಂಭಿಸಲಾಗಿದೆ.
ಮಾರ್ಚ್ 18ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕರುಹಳೆಯ ಮಂಜೂರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿಗಮನಿಸಿದ್ದಾರೆ. ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ನಕಲಿ ದಾಖಲೆಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿತ್ತು.
ಸಾಗರ ತಹಶಿಲ್ದಾರ್ ಕಚೇರಿಯಲ್ಲಿ ಈ ಕಾರ್ಯವೆಸಗುತ್ತಿದ್ದವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತಿದ್ದು , ಹೀಗೆ ಯಾವುದೇ ಸರ್ಕಾರಿ ದಾಖಲೆಗಳನ್ನು ನಕಲು ಮಾಡಿ, ಜಮೀನು ಮಂಜೂರುಮಾಡಲು ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅವರು ಮನವಿಮಾಡಿದ್ದಾರೆ.
