ಶಿವಮೊಗ್ಗ, ಮಾ.25: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ ಇವರು ಮಾ.25 ರ ರಾತ್ರಿ ಶಿವಮೊಗ್ಗಕ್ಕೆ ಆಗಮಿಸಿ, ಮಾ.26 ರಂದುವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ಮಾ.26 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡಗಳ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳು ಮತ್ತು ಸಾಮಾನ್ಯ ಜನರಿಂದ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸುವರು. 10.30 ರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾಅನುಷ್ಟಾನ ಸಮಿತಿ ಅಧ್ಯಕ್ಷರು, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಮತ್ತು ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 2.15 ಕ್ಕೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
