ಶಿವಮೊಗ್ಗ, ಏ.1: ನಗರದ ವೆಂಕಟೇಶ ನಗರ 5 ನೇ ಕ್ರಾಸ್ ಚಾನೆಲ್ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಪರಸ್ಪರ ಡಿಕ್ಕಿಯಾಗಿ ಮಹಿಳೆಯೊಬ್ಬರ ಎಡಗಾಲಿನ ಪಾದವು ತೀವ್ರ ಗಾಯವಾಗಿದ್ದು, ಮತ್ತೊಬ್ಬ ವ್ಯಕ್ತಿಗೆ ಪೆಟ್ಟಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿ ರಕ್ತಸಾವ್ರವಾಗಿತ್ತು.
ಈ ಘಟನೆಯ ಮಾಹಿತಿ ಕೂಡಲೇ ಸ್ಥಳಕ್ಕೆ ಧಾವಿಸಿದ ಅಕ್ಕ ಪಡೆಯ ಅಧಿಕಾರಿ ಮತ್ತು ಸಿಬ್ಬಂಧಿಗಳು ಗಾಯಗೊಂಡಿರುವ ಇಬ್ಬರು ವ್ಯಕ್ತಿಗಳನ್ನು ಉಪಚರಿಸಿ, ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುತ್ತಾರೆ.
ಅಕ್ಕ ಪಡೆಯ ಈ ಉತ್ತಮವಾದ ಕಾರ್ಯವನ್ನು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರು ಅಕ್ಕ ಪಡೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
