ಶಿವಮೊಗ್ಗ ,ಏ.2: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 4 ಮತ್ತು 5 ರಂದು ನಗರದ ದೈನಂದಿನ ನೀರುಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮೆಸ್ಕಾಂ ವತಿಯಿಂದ ಅಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದ್ದು, ಜಲಶುದ್ಧೀಕರಣ ಘಟಕದ ಕಾರ್ಯನಿರ್ವಹಣೆಗೆ ಅಡಚಣೆಯಾಗಲಿದೆ. ಇದರಿಂದಾಗಿ ಅಂದು ನಗರದಾದ್ಯಂತ ಸಾರ್ವಜನಿಕರಿಗೆ ಪೂರೈಕೆಯಾಗುವ ನೀರಿನ ಪ್ರಮಾಣದಲ್ಲಿ ಏರುಪೇರಾಗಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಿಸಿಟ್ಟುಕೊಂಡು ಮಂಡಳಿಯೊಂದಿಗೆ ಸಹಕರಿಸಬೇಕೆಂದು ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
