ಶಿವಮೊಗ್ಗ, ಏ. 04: ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್. ವಿ. ಬಡಾವಣೆ, ಮೆಸ್ಕಾಂ ಕಛೇರಿಯಲ್ಲಿ ಏಪ್ರಿಲ್– 07 ರಂದು ಬೆಳಿಗ್ಗೆ 11.00 ರಿಂದ 1.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ;.9480841339. ಸಂಪರ್ಕಿಸಬಹುದು.
