ಶಿವಮೊಗ್ಗ,ಏ.15: ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನು ಮೂರು ತಿಂಗಳೊಳಗೆ ಬಾಕಿ ಕೆಲಸ ಮುಗಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಇಂದು ಮಾಧ್ಯಮಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ನಿರ್ಮಿಸಲು ರೈತರಿಂದ ಜಾಗವನ್ನು ಪಡೆದಿದ್ದು, ಇದರ ಬದಲಾಗಿ ರೈತರಿಗೆ ಪರಿಹಾರವನ್ನು ನೀಡಬೇಕಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ ಎಂದರು.
ಗಮನಿಸಿ: ಬಾಳೆಬರೆ ಘಾಟ್ : ಪ್ರಯಾಣಿಕರ ಅದಲು-ಬದಲು ವ್ಯವಸ್ಥೆ ಮೂಲಕ ಸಾರಿಗೆ ಸಂಪರ್ಕ
ಇಂಡಿಗೋ ವಿಮಾನ ಸೇವೆ ಸಂಬಂಧಿಸಿದಂತೆ ಉತ್ತರಿಸಿ, ಮೇ.1 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗೀತಗೊಳ್ಳಲ್ಲಿದ್ದು, ಇದರಿಂದ ಅನೇಕ ಪ್ರಯಾಣಿಕರ ಪ್ರಯಾಣಕ್ಕೆ ತೊಂದರೆ ಉಂಟಾಗಲಿದೆ. ಈ ನಿಟ್ಟಿನಲ್ಲಿ ಇಂಡಿಗೋ ವಿಮಾನ ಸೇವೆಯನ್ನು ಉಳಿಸಿಕೊಂಡು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.
