ಮಹಿಳಾ ಮೀಸಲಾತಿ ಸೋಲಿಸಿದ ಕಾಂಗ್ರೆಸ್‌ನ್ನು ಮಹಿಳೆಯರು ಕ್ಷಮಿಸುವುದಿಲ್ಲ.
ಸಂಸದ ಬಿ ವೈ ರಾಘವೇಂದ್ರ ವಾಗ್ದಾಳಿ
ಮಹಿಳಾ ಮೀಸಲಾತಿ ಮಸೂದೆಯನ್ನು ವಿಫಲಗೊಳಿಸಿರುವ ಕಾಂಗ್ರೇಸ್ ಮತ್ತು ಅದರ ಮಿತ್ರ ಪಕ್ಷಗಳನ್ನು ದೇಶದ ಮಹಿಳೆಯರು ಕ್ಷಮಿಸುವುದಿಲ್ಲ ಎಂದು ವಿಪಕ್ಷಗಳ ವಿರುದ್ದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಗೆ ಅನುಮೋದನೆ ಮತ್ತು ಕ್ಷೇತ್ರ ವಿಂಗಡಣೆಯ ಸಂವಿಧಾನಿಕ ತಿದ್ದುಪಡಿಯಿಂದ ದೇಶದ ಮಹಿಳೆಯರಿಗೆ ಸಮಾನತೆ ತರುವ ಕೆಲಸ ನಡೆದಿತ್ತು. ಆದರೆ ಇದನ್ನು ಕಾಂಗ್ರೆಸ್ ನೇತೃತ್ವದ ಐಎನ್‌ಡಿಎ ಕೂಟ ಸೋಲಿಸುವ ಮೂಲಕ ಸಂಭ್ರಮಿಸಿದೆ. ಇದು ದೇಶದ ಮಹಿಳೆಯರಿಗೆ ಮಾಡಿದ ಅವಮಾನ. ಇದನ್ನು ದೇಶದ ಮಹಿಳೆಯರು ಮರೆಯುವುದಿಲ್ಲ ಎಂದರು.
“ಅಣ್ಣ ಬಸವಣ್ಣನವರ ಸಮಸಮಾಜ ಕಟ್ಟುವ ವಿಚಾರಗಳು ಇಂದಿಗೂ ಜಗತ್ತಿಗೆ ದಾರಿ ದೀಪ, ಬಸವಣ್ಣನವರು ಪ್ರತಿಪಾದಿಸಿದ ಮಹಿಳಾ ಸಮಾನತೆಯನ್ನು ಜಾರಿಗೊಳಿಸುವ ನರೇಂದ್ರ ಮೋದಿ ಅವರ ಆಶಯಕ್ಕೆ ಕಾಂಗ್ರೆಸ್ ತಣ್ಣೀರೆರೆಚಿದೆ. ಕಾಂಗ್ರೇಸ್ ಮಾಡಿದ ಈ ಅವಮಾನವನ್ನು ದೇಶದ ಮಹಿಳೆಯರು ಎಂದಿಗೂ ಮರೆಯಲ್ಲ.”
– ಬಿ.ವೈ ರಾಘವೇಂದ್ರ
