Homeರಾಜ್ಯನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

Spread the love

2026 ನೇ ಸಾಲಿನ  ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಏ.23 ಬೆಳಿಗ್ಗೆ 12 ಗಂಟೆಗೆ ಪತ್ರಿಕಾ ಗೋಷ್ಠಿಯನ್ನು ಮೂಲಕ ಪ್ರಕಟಿಸಲಿದ್ದಾರೆ.

ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು.

ಗಮನಿಸಿ:ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ: ಮಧು ಬಂಗಾರಪ್ಪ

ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಏ.23 ರಂದು ಮಧ್ಯಾಹ್ನ 12.00 ಗಂಟೆಗೆ ಲಭ್ಯಗೊಳಿಸಲಾಗುತ್ತದೆ. https://www.digilocker.gov.in ವೆಬ್ ಸೈಟ್ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳವ Video link https://tinyurl.com/mw84wmh9 ಅನ್ನು ಬಳಸಿ ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನುಸಂಬಂಧಿತ ಶಾಲೆಗಳಿಗೆ ಏ.23 ರಂದು ಮಧ್ಯಾಹ್ನ 12.00 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments