Homeಜಿಲ್ಲೆನೀಟ್ ಪರೀಕ್ಷೆ - ಜಿಲ್ಲಾಡಳಿತದಿಂದ ಬಿಗಿ ಕ್ರಮ : ಹೇಮಂತ್ ಎನ್

ನೀಟ್ ಪರೀಕ್ಷೆ – ಜಿಲ್ಲಾಡಳಿತದಿಂದ ಬಿಗಿ ಕ್ರಮ : ಹೇಮಂತ್ ಎನ್

Spread the love

ಶಿವಮೊಗ್ಗ, ಮೇ 02: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET-UG 2026)  ದಿನಾಂಕ 03.05.2026 ರಂದು ಮಧ್ಯಾಹ್ನ 02:00 ರಿಂದ ಸಂಜೆ 05:00 ರವರೆಗೆ ನಡೆಯಲಿದ್ದು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ(ಪ್ರ) ಹೇಮಂತ್ ಎನ್ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ನೀಟ್ ಪರೀಕ್ಷೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು.

ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದ್ದು, ಒಟ್ಟು 4577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.

ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕಸುರಕ್ಷಾ ಸಂಹಿತೆ-2023 ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ.

ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗಮನಿಸಿ:ಲೈಂಗಿಕ ದೌರ್ಜನ್ಯ – 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಆಸನ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್‌ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಒಂದು ವೇಳೆ ಇಂತಹ ವಸ್ತುಗಳನ್ನು ತಂದಿದ್ದಲ್ಲಿ, ಅಭ್ಯರ್ಥಿಗಳ ಸ್ವಂತ ಜವಾಬ್ದಾರಿಯ ಮೇಲೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ನಿಯೋಜಿತ ಸಿಬ್ಬಂದಿ ಮಾತ್ರ ಹಾಜರಿರಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments