Homeಅಪರಾಧಪ್ರಿಯಕರ ಜೊತೆ ಸೇರಿ ಗಂಡನನ್ನು ಕೊಂದ ಹೆಂಡತಿ: ಆರೋಪಿಗಳಿಗೆ ಗಲ್ಲು ಶಿಕ್ಷೆ

ಪ್ರಿಯಕರ ಜೊತೆ ಸೇರಿ ಗಂಡನನ್ನು ಕೊಂದ ಹೆಂಡತಿ: ಆರೋಪಿಗಳಿಗೆ ಗಲ್ಲು ಶಿಕ್ಷೆ

Spread the love

ಶಿವಮೊಗ್ಗ, ಮೇ.8: ಅನೈತಿಕ ಸಂಬಂಧಕ್ಕೆ ಗಂಡ ಅಡ್ಡಿ ಬರುತ್ತಾನೆಂದೆ ಕೊಲೆ. ಪ್ರಿಯಕರ ಹಾಗೂ ಆತನ ಹೆಂಡತಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ದಿನಾಂಕಃ 15-01-2020  ರಂದು ಭದ್ರಾವತಿ ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿಯಾದ ಫ್ಲೋರಾ ನ್ಯಾನ್ಸಿ ಎಂಬ ಮಹಿಳೆಯು ರಾಜಶೇಖರಯ್ಯ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡು, ಆಕೆಯ ಗಂಡನಾದ ಪ್ರಕಾಶ್ ಬಾಬು ಇವರಿಬ್ಬರ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಆರೋಪಿತರಿಬ್ಬರು ಸೇರಿ ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಬಗ್ಗೆ ಗುನ್ನೆ ಸಂಖ್ಯೆ 50/2020  ಕಲಂ 302, 201 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ಗಮನಿಸಿ:ಕಂಠೀರವ ಸ್ಟುಡೀಯೊ ನಿರ್ಮಾಣಕ್ಕೆ ಜಮೀನು ಖಾಲಿ ಇದೆ- ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇವೆ.

ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಪೊಲೀಸ್‌ ನಿರೀಕ್ಷಕ ಮಂಜುನಾಥ್ . .  ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ. ವಾದ ಮಂಡಿಸಿದ್ದು ಭದ್ರಾವತಿಯ ಘನ 4ನೇ ಹೆಚ್ಚುವರಿ ಜಿಲ್ಲಾಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ ಮಾನ್ಯ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ರವರು ಆರೋಪಿತರಿಗೆ ಗಲ್ಲು ವರ್ಷ ಶಿಕ್ಷೆ ಹಾಗೂ  14,00,000/- ದಂಡ ವಿಧಿಸಿದ್ದು, ಪಿರ್ಯಾದಿಗೆ ಪರಿಹಾರವಾಗಿ 5,00,000/- ರೂ ನೀಡಲು ಆದೇಶಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments