Homeರಾಜ್ಯನೀಟ್ ಪರೀಕ್ಷೆ ರದ್ದತಿ-ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮೋದಿ ಸರ್ಕಾರವೇ ಕಾರಣ: ಸಿಎಂ

ನೀಟ್ ಪರೀಕ್ಷೆ ರದ್ದತಿ-ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮೋದಿ ಸರ್ಕಾರವೇ ಕಾರಣ: ಸಿಎಂ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಮೇ.19

ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರವೇ ನೇರ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ತುಮಕೂರಿನಲ್ಲಿ ಮಾಧ್ಯಮಗಾರೊಂದಿಗೆ ಮಾತನಾಡಿ, ರಾಜ್ಯದ ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆಯನ್ನು ತಿರಸ್ಕರಿಸಿ ನೀಟ್ ನಲ್ಲಿ ಅದ್ವಾನ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಮೋದಿಯ ಅಚ್ಚೇ ದಿನ ಬರಲಿಲ್ಲ ಎಂದು ಟೀಕಿಸಿದರು.

ಗಮನಿಸಿ: ಮೋದಿ ದರ್ಬಾರಿನಲ್ಲಿ ಅಂಬಾನಿ, ಅದಾನಿಗೆ ಮಾತ್ರ ಲಾಭ: ಸಿಎಂ ಕಿಡಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಕಾರಣ ಪರೀಕ್ಷೆ ಬರೆದ ಅನೇಕ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ತಡೆಯದ ಮೋದಿ ಸರ್ಕಾರಕ್ಕೆ ತಡಯಲಾಗಲಿಲ್ಲ.

ಇನ್ನು ರೈತರ ಆದಾಯವನ್ನೂ ದುಪ್ಪಟ್ಟು ಮಾಡಲಿಲ್ಲ. ಕಪ್ಪು ಹಣ ತರಲಿಲ್ಲ. ಹೀಗಾಗಿ ಬಿಜೆಪಿ ಮತ್ತು ಅದರ ಅಂಗಸಂಸ್ಥೆ ಆರ್‌ಎಸ್‌ಎಸ್ ಸರ್ಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ದೇಶದ ಸಾಲವನ್ನು 220 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ. ನಾವು ನೆಮ್ಮದಿಯ ನಾಡು ಕಟ್ಟುವ ಸರ್ಕಾರ ಕೊಟ್ಟಿದ್ದೇವೆ. ಮೋದಿ ದೇಶದ ನೆಮ್ಮದಿ ಕಸಿಯುವ ಸರ್ಕಾರ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments