Homeಅಪರಾಧಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆ; ಮೂವರ ಬಂಧನ

ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆ; ಮೂವರ ಬಂಧನ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಮೇ.21

ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೇ19 ರಂದು ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ, ತರಿಕೆರೆ ತಾಲೂಕು ಕಲ್ಲತ್ತಿಪುರದ ವೆಂಕಟರಮಣ, ತಿರುವಣ್ಣಾಮಲೈ ಜಿಲ್ಲೆಯ ಕುಂಬಳೂರು ಗ್ರಾಮದ ಕನ್ನಿಯಪ್ಪನ್ ಹಾಗೂ ವಲ್ಲಿಯೂರು ಗ್ರಾಮದ ಸುರೇಶ್ ಇವರುಗಳು ಬೇಟೆಯಾಡಿದ ಜಿಂಕೆ ಜಾತಿಗೆ ಸೇರಿದ ಪ್ರಾಣಿಯ ಕಳೆ ಬರಹ ಹಾಗೂ ಬೇಟೆಯಾಡಲು ಉಪಯೋಗಿಸಿದ ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತಾರೆ.

ಗಮನಿಸಿ: ಮೋದಿ “ಮೇಲೊಡಿ” ಯಲ್ಲಿ ಮುಳುಗಿದ ದೇಶದ ಮಾಧ್ಯಮಗಳು

ಬೆಂಗಳೂರು ಸಿ..ಡಿ. ಅರಣ್ಯ ಘಟಕದ ಪೊಲೀಸ್ ಉಪ ಮಹಾನಿರೀಕ್ಷಕರಾದ ಶ್ರೀಮತಿ ಸಂಗೀತಾ ಜಿ, ಮಡಿಕೇರಿ ಸಿ..ಡಿ. ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಇವರುಗಳ ಮಾರ್ಗದರ್ಶನಲ್ಲಿ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ಬಾಬುದ್ದೀನ್ ಮತ್ತು ಸಿಬ್ಬಂದಿಗಳಾದ ದೇವರಾಜ, ಕೃಷ್ಣರಾಜ್ ಅರಸ್, ದಿಲೀಪ್, ನಟರಾಜ್, ಹಾಲೇಶ್, ಹೇಮಾವತಿ, ಚಾಲಕರಾದ ತಿಮ್ಮಶೆಟ್ಟಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಅರಣ್ಯ ಕಾಯ್ದೆ ಮತ್ತು ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಗೆ ಸಂಬಂಧಪಟ್ಟ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಮಡಿಕೇರಿ ಸಿಐಡಿ ಅರಣ್ಯ ಘಟಕ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂ.: 9480800220 ಹಾಗೂ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಕಚೇರಿ ದೂ.ಸಂ.: 9480803394ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಸಾಗರ ಸಿ..ಡಿ. ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments