Homeಜಿಲ್ಲೆವಾಹನ ಸವಾರರಿಗೆ ಸುವರ್ಣಾವಕಾಶ: ದಂಡ ಪಾವತಿಗೆ ರಿಯಾಯಿತಿ

ವಾಹನ ಸವಾರರಿಗೆ ಸುವರ್ಣಾವಕಾಶ: ದಂಡ ಪಾವತಿಗೆ ರಿಯಾಯಿತಿ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ.5

ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.

ಗಮನಿಸಿ: ಹವಾಮಾನ ಬದಲಾವಣೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ: ಅಭಿಷೇಕ್ ವಿ

ಈ ರಿಯಾಯಿತಿಯು ನಿರ್ದಿಷ್ಟ ಅವಧಿಯ ಪ್ರಕರಣಗಳಿಗೆ ಮಾತ್ರ ಅನ್ವಯಿಸಲಿದೆ. 1991 ರಿಂದ 2022 ರ ಒಳಗಾಗಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳಿಗೆ ಮಾತ್ರ ಈ 50% ದಂಡ ಪಾವತಿ ರಿಯಾಯಿತಿ ಅನ್ವಯವಾಗುತ್ತದೆ.

ಶಿವಮೊಗ್ಗ ಜಿಲ್ಲೆಯ ಬಾಕಿ ಪ್ರಕರಣಗಳು: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದ್ಯ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ.

ದಂಡ ಪಾವತಿಯ ಅವಧಿ: ಅರ್ಹ ವಾಹನ ಮಾಲೀಕರು ದಿನಾಂಕ: 21-06-2026 ರಿಂದ 10-07-2026 ರೊಳಗೆ ಈ ರಿಯಾಯಿತಿಯನ್ನು ಬಳಸಿಕೊಂಡು ದಂಡ ಪಾವತಿಸಿ, ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದಾಗಿದೆ.
ವಾಹನ ಮಾಲೀಕರು ಈ ನಿಗದಿತ ಅವಧಿಯೊಳಗೆ ರಿಯಾಯಿತಿಯ ಲಾಭವನ್ನು ಪಡೆದುಕೊಂಡು ಸಹಕರಿಸಬೇಕಾಗಿ ಅವರು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments