Homeಜಿಲ್ಲೆಎಸ್‌ಟಿ ನಿಗಮದ ಹಣ ದುರ್ಬಳಕ್ಕೆ- ಜೆಡಿಎಸ್ ಘಟಕದಿಂದ ಬೃಹತ್ ಪ್ರತಿಭಟನೆಗೆ ಕರೆ

ಎಸ್‌ಟಿ ನಿಗಮದ ಹಣ ದುರ್ಬಳಕ್ಕೆ- ಜೆಡಿಎಸ್ ಘಟಕದಿಂದ ಬೃಹತ್ ಪ್ರತಿಭಟನೆಗೆ ಕರೆ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ.9

ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರ್ಕಾರದಿಂದ ಸೌಲಭ್ಯ ಸಿಗುತ್ತಿಲ್ಲ ಹಾಗೂ ಎಸ್‌ಟಿ ಸಮುದಾಯ ಅಭಿವೃದ್ದಿ ನಿಗಮಕ್ಕೆ ಬಿಡುಗಡೆಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದ್ದು, ಇದನ್ನು ವಿರೋಧಿಸಿ ಜೆಡಿಎಸ್ ಜಿಲ್ಲಾ ಎಸ್‌ಟಿ ಘಟಕದ ವತಿಯಿಂದ ಜೂ.15 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಆರ್.ಹನುಮಂತಪ್ಪ ತಿಳಿಸಿದರು.

ಮಂಗಳವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೂ.15 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಶಾಸಕಿ ಶಾರದಾ ಪೂರ್ಯನಾಯ್ಕ, ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಶಾರದಾ ಅಪ್ಪಾಜಿ ಗೌಡ, ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಸೇರಿದಂತೆ ಪಕ್ಷದ ಜಿಲ್ಲಾ ಮುಖಂಡರು, ಕಾರ್ಯಕರ್ತರು, ವಾಲ್ಮೀಕಿ ಸಮುದಾಯ ಮುಖಂಡರು ಸೇರಿದಂತೆ ಸುಮಾರು 1000 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಗಮನಿಸಿ: ದೇಶದೆಲ್ಲೆಡೆ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲು ಕಾರ್ಯಾಗಾರ: ಮಂಜುನಾಥ್ ಭಂಡಾರಿ

ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮಾಂತರ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಪರಿಶಿಷ್ಟ ಪಂಗಡದ ಅಭಿವೃದ್ದಿ ನಿಗಮಕ್ಕೆ ತಕ್ಷಣವೇ ಅಧ್ಯಕ್ಷರನ್ನು ಹಾಗೂ ಅಧಿಕಾರಿಗಳನ್ನು ನೇಮಕ ಮಾಡಿ. ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಪ್ರಮುಖರಾದ ತ್ಯಾಗರಾಜ್, ಕಮಲಮ್ಮ, ನಾರಾಯಣ್, ಆಂಜನಯ್ಯ, ರವಿಕುಮಾರ್, ರಂಗನಾಥ್, ಸಿದ್ದಪುರ ಬಸವರಾಜು, ನಾಗರಾಜ್ ಇನ್ನಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments