Homeಜಿಲ್ಲೆಮತದಾನದಿಂದ ಅಲ್ಪಸಂಖ್ಯಾತರು ಮತ್ತು ದಲಿತರನ್ನು ಆಚೆ ಇಡುವ ಪ್ರಯತ್ನ: ಕಿಮ್ಮನೆ ರತ್ನಾಕರ್

ಮತದಾನದಿಂದ ಅಲ್ಪಸಂಖ್ಯಾತರು ಮತ್ತು ದಲಿತರನ್ನು ಆಚೆ ಇಡುವ ಪ್ರಯತ್ನ: ಕಿಮ್ಮನೆ ರತ್ನಾಕರ್

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ.18:

ಎಸ್‌ಐಆರ್ ಮೂಲಕ ಮತದಾನದಿಂದ ಈ ದೇಶದ ಅಲ್ಪಸಂಖ್ಯಾತರು ಮತ್ತು ದಲಿತರನ್ನು ಆಚೆ ಇಡುವ ಪ್ರಯತ್ನ ಮೋದಿ ಮತ್ತು ಅಮಿತ್ ಷಾ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗುಡುಗಿದರು.

ಗುರುವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ದೇಶವನ್ನು ಧಮನ ಮಾಡಲು ಮೋದಿ ಮತ್ತು ಅಮಿತ್ ಷಾ ಸಿದ್ದರಾಗಿದ್ದು, ಇದು ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಅತ್ಯಾಚಾರವಾಗಿದೆ.

ಕೇಂದ್ರ ಸರ್ಕಾರ ಕೇವಲ ಒಂದು ತಿಂಗಳ ಅವಧಿಯಲ್ಲಿ ಎಸ್‌ಐಆರ್ ಮಾಡಲು ಹೊರಟಿದೆ. ಇದರಿಂದ ಈ ದೇಶದ ಭವಿಷ್ಯವನ್ನು ರೂಪಿಸುವ ಅಲ್ಪಸಂಖ್ಯಾತರು ಮತ್ತು ದಲಿತರ ಹಕ್ಕನ್ನು ಕಸಿದಂತಾಗುತ್ತಿದೆ. ಕನಿಷ್ಟ ಆರು ತಿಂಗಳಾದರೂ ಕಾಲಾವಕಾಶ ನೀಡಿದರೆ ಉತ್ತಮವಾಗಿರುತ್ತಿತ್ತು. ಆದರೆ ಕೇಂದ್ರ ಸರ್ಕಾರದ ಇಷ್ಟೊಂದು ಆತುರದ ನಿರ್ಧಾರವೂ ಅನುಮಾನು ಮೂಡಿಸುತ್ತಿದೆ ಎಂದರು.

ಎಸ್‌ಐಆರ್ ಮೂಲಕ ಮತದಾರರ ಪಟ್ಟಯಿಂದ ಜನರನ್ನು ಆಚೆ ಇಡುವಂತಹ ದುರ್ಗುಣ ಪ್ರಯತ್ನ ಮಾಡಲಾಗಿದ್ದು, ಇಂತಹ ಕೆಟ್ಟ ಆಲೋಚನೆಗಳು ಬಿಜೆಪಿಗೆ ಮಾತ್ರ ಬರುವುದು. ನ್ಯಾಯಾಲಯವು ಕೂಡ ಬಿಜೆಪಿಯೊಂದಿಗೆ ಸೇರಿಕೊಂಡು ಜನ ವಿರೋಧಿ ಕೆಲಸಕ್ಕೆ ಸಹಕಾರ ನೀಡುತ್ತಿದೆ. ಇದರಿಂದ ಜನರಿಗೂ ನ್ಯಾಯಾಲಯದ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದೆ. ಅದರಂತೆ ಬಿಜೆಪಿಯ ಪರವಾದ ಕ್ರಿಮಿನಲ್ ಕೇಸ್‌ನಲ್ಲಿ ತೀರ್ಪನ್ನು ನೀಡಿರುವ ನ್ಯಾಯಾಧೀಶರೆಲ್ಲಾ ಇಂದಿಗೆ ಸರ್ಕಾರದಲ್ಲಿ ಉತ್ತಮ ಸ್ಥಾನವನ್ನು ಪಡೆದಿದ್ದಾರೆ. ಚುನಾವಣಾಧಿಕಾರಿಯನ್ನು ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಸುಪ್ರಿಂಕೋರ್ಟ್ ನ್ಯಾಯಾಧೀಶರನ್ನು ಕೈಬಿಟ್ಟಿರುವುದಾದರೂ ನೇಮಕ ಮಾಡುತ್ತಿದ್ದಾರೆ ಎಂದು ಕುಟುಕಿದರು.

ಬಿಜೆಪಿ ಜಾತಿ ಮತ್ತು ಧರ್ಮವನ್ನು ರಾಜಕೀಯಕ್ಕೆ ತಂದು ರಾಜಕಾರಣ ವ್ಯವಸ್ಥೆಯನ್ನು ಆಳು ಮಾಡುತ್ತಿದ್ದು, ಈ ದೇಶವನ್ನು ಇನ್ನೊಂದು ಅಫ್ಘಾನಿಸ್ತಾನ್ ಹಾಗೂ ತಾಲಿಬಾನ್ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments