Homeಜಿಲ್ಲೆಕ್ರೀಡೆಗಳು ಕೇವಲ ಮನರಂಜನೆಯ ಸಾಧನವಲ್ಲ: ರಮೇಶ್

ಕ್ರೀಡೆಗಳು ಕೇವಲ ಮನರಂಜನೆಯ ಸಾಧನವಲ್ಲ: ರಮೇಶ್

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.3

ಕ್ರೀಡೆಗಳು ಕೇವಲ ಮನರಂಜನೆಯ ಸಾಧನವಲ್ಲದೆ ಇದು ಮಕ್ಕಳ ಮನಸ್ಸಿಗೆ ಉಲ್ಲಾಸ ನೀಡುವುದರ ಜೊತೆಗೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು.

ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ ಇವರ ಆಶ್ರಯದಲ್ಲಿ ಸೋಮವಾರ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2 ದಿನಗಳ “ದಕ್ಷಿಣ ವಲಯ ಕ್ರೀಡಾಕೂಟ 2026-2027” ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಉದ್ಯೋಗ ಪಡೆಯಲು ಸಹ ಕ್ರೀಡಾಕೇತ್ರದ ಸಾಧನೆ ಕಾರಣವಾಗುತ್ತದೆ. ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಮೂಡಿಸಬೇಕಾದ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ವೈಯಕ್ತಿಕ ಗಮನ ಹರಿಸಿ ಪ್ರತಿಯೊಬ್ಬ ಮಗುವಿನಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.

ಗಮನಿಸಿ: ಆಯೋಗ್ಯ-2 ‘ಮಿಲ್ಕಿ ಬ್ಯೂಟಿ’ ಹಾಡಲ್ಲಿ ನಟಿ ಪ್ರಜ್ಞಾ

“ರಾಜ್ಯ ಸರ್ಕಾರವು ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳಿಗಾಗಿ ಪ್ರತಿ ವರ್ಷ ಸಾಕಷ್ಟು ಅನುದಾನವನ್ನು ಮೀಸಲಿಡುತ್ತಿದೆ. ಈ ಎಲ್ಲಾ ಸೌಲಭ್ಯಗಳನ್ನು ಶಾಲೆಗಳು ಮತ್ತು ಶಿಕ್ಷಕರು ಸದುಪಯೋಗಪಡಿಸಿಕೊಂಡು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು” ಎಂದು ತಿಳಿಸಿದರು.

ಮೈನ್ ಮಿಡ್ಲ್ ಸ್ಕೂಲ್ ಮುಖ್ಯೋಪಾಧ್ಯಾಯನಿ ಕವಿತಾ ಆರ್ ಮಾತನಾಡಿ, “ದಕ್ಷಿಣ ವಲಯದ 24 ಶಾಲೆಗಳ ನೂರಾರು ಮಕ್ಕಳು ಈ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದಾರೆ. ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದೇ ಮುಖ್ಯ. ಪ್ರತಿಯೊಬ್ಬ ಮಗುವೂ ಕ್ರೀಡಾ ಮನೋಭಾವದಿಂದ ಸ್ಪರ್ಧಿಸಬೇಕು. ಕ್ರೀಡೆಯಿಂದ ಶಿಸ್ತು, ತಂಡದ ಕೆಲಸ ಮತ್ತು ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸವಿತಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮೌನೇಶ್, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅದ್ಯಕ್ಷ ಆನಂದಪ್ಪ, ಪ್ರಮುಖರಾದ ಶ್ರೀಧರ್ ಜೋಷಿ, ರತನ್, ಸಿಆರ್‌ಪಿ ಯತೀಶ್ ಮುಂತಾದವರು ಇದ್ದರು.

ಎಂಎಡಿಬಿ ಅಧೀನ ಕಾರ್ಯದರ್ಶಿ ಹಾಗೂ ಜಿ.ಪಂ ಸಿಪಿಓ ಹನುಮನಾಯ್ಕ ಕ್ರೀಡಾಕೂಟಕ್ಕೆ ಸರ್ವ ರೀತಿಯ ಸಹಕಾರ ನೀಡಿದ್ದಾರೆ. ಊಟದ ವ್ಯವಸ್ಥೆ ಮಾಡಿದ್ದಾರೆ. ಜೊತೆಗೆ ಈ ಕಾರ್ಯಕ್ರಮದ ಪ್ರಾಯೋಜತ್ವವನ್ನು ಕುಟ್ಟಿಸ್ ಫ್ಯಾಮಿಲಿ ವಹಿಸಿತ್ತು.

ಬ್ಯಾರಿಸ್ ಸಿಟಿ ಸೆಂಟರ್ ವತಿಯಿಂದ ದೈಹಿಕ ಶಿಕ್ಷಕರಿಗೆ ಉಚಿತ ಟೀ ಶರ್ಟ್ ನೀಡಲಾಯಿತು. ಉದ್ಘಾಟನಾ ಸಮಾರಂಭದ ನಂತರ ಅಥ್ಲೆಟಿಕ್ಸ್, ಕಬಡ್ಡಿ, ಖೋ-ಖೋ, ಚೆಸ್, ಲಾಂಗ್ ಜಂಪ್, ಶಾಟ್‌ಪುಟ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ವಿಜೃಂಭಣೆಯಿಂದ ಪ್ರಾರಂಭಗೊಂಡವು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments