ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.31
ಪೋಷಕರ ದೇಸ್ಥಾನಕ್ಕೆ ಹೋದ ವೇಳೆ ಡೆತ್ ನೋಟ್ ಬರೆದಿಟ್ಟು 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ನಗರದ ತುಂಗನಗರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ಈ ಡೆತ್‌ನೋಟ್ ಪೋಷಕ ವಿರುದ್ದವಾಗಿರುವುದು ಎಂದು ತಿಳಿದು ಬಂದಿದ್ದು, ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ ಎಂದು ಗುರುತಿಸಲಾಗಿದೆ.
ಸೃಷ್ಟಿ ನಗರದ ರಾಮಕೃಷ್ಣ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಪೋಷಕರು ಓದು ಎಂದು ಬಲವಂತ ಮಾಡಿದ್ದೇ ಕಾರಣವಾಗಿರಬಹುದು ಎಂಬ ಮಾಹಿತಿ ಕೇಳಿಬಂದಿದೆ.
ಗಮನಿಸಿ: “ಭಾಗವತ್”ರೆ ಬೋಧಿಸುವುದನ್ನ ಬಿಟ್ಟು ಮೊದಲು ಆಚರಿಸಿ
ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಕುಟುಂಬದಲ್ಲಿ ಮೂವರು ಮಕ್ಕಳಿದ್ದು, ಸೃಷ್ಟಿಯ ಪೋಷಕರು ಇಬ್ಬರು ಮಕ್ಕಳನ್ನು ಕರೆದುಕೊಂಡು ರಾಯರ ಆರಾಧನೆ ಹಿನ್ನಲೆಯಲ್ಲಿ ರಾಘವೇಂದ್ರ ಸ್ವಾಮಿ ಮಠಕ್ಕೆ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದೆ. ಸೃಷ್ಟಿಯನ್ನು ಮಾತ್ರ ಮನೆಯಲ್ಲಿ ಬಿಟ್ಟು ಹೋಗಲಾಗಿತ್ತು ಎನ್ನಲಾಗಿದೆ.
ತನ್ನನ್ನು ಮನೆಯಲ್ಲಿ ಬಿಟ್ಟು ಹೋಗಿದ್ದರಿಂದ ಪೋಷಕರು ಮನೆಗೆ ವಾಪಾಸ್ ಬರುವದರೊಳಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಮಾತುಗಳು ಕೇಳಿಬಂದಿವೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಕುರಿತು ಕುಟುಂಬದವರು ನೀಡಿರುವ ದೂರು ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ಸಂಪೂರ್ಣ ಮಾಹಿತಿ ಹೊರಬರಬೇಕಿದೆ.
