Homeಜಿಲ್ಲೆಸ್ವಂತ ಸಾಧನೆ ಇಲ್ಲ, ಅಪ್ಪನ ಹೆಸರಿನಿಂದ ಸಚಿವರಾಗಿದ್ದಿರಾ: ಸಿದ್ರಾಮಣ್ಣ

ಸ್ವಂತ ಸಾಧನೆ ಇಲ್ಲ, ಅಪ್ಪನ ಹೆಸರಿನಿಂದ ಸಚಿವರಾಗಿದ್ದಿರಾ: ಸಿದ್ರಾಮಣ್ಣ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಸೆ.2

ಮಧು ಬಂಗಾರಪ್ಪ ಅವರ ತಂದೆಯ ಹೆಸರಿನಿಂದ ಸಚಿವರಾಗಿದ್ದಾರೆ ಹೊರತು ತಮ್ಮ ಸ್ವಂತ ಹೋರಾಟ ಅಥವಾ ಸಾಧನೆಯಿಂದ ಅಲ್ಲ ಎಂದು ಬಿಜೆಪಿಯ ಪ್ರಭಾರಿ ಸಿದ್ರಾಮಣ್ಣ ಕುಟುಕಿದರು.

ಕಸ್ತೂರಿನ ರಂಗನ್ ವರದಿ ಕುರಿತು ಸಚಿವರು ನೀಡಿರುವ ಹೇಳಿಕೆಯನ್ನು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದರು.

ಬಂಗಾರಪ್ಪನವರು ಈ ಹಿಂದೆ ನನಗೆ ತಮ್ಮ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದರು. ಆ ಋಣ ತೀರಿಸಲು ಮಧು ಬಂಗಾರಪ್ಪರಿಗೆ ನನ್ನ ಅವಧಿಯಲ್ಲಿ ಸಚಿವರನ್ನಾಗಿ ಮಾಡಿದ್ದೇನೆ ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಹೇಳಿಕೆಯೇ ಅವರು ಸಚಿವ ಸ್ಥಾನ ಹೇಗೆ ದೊರಕಿತು ಎಂಬುದು ತಿಳಿಸುತ್ತದೆ ಎಂದು ಟೀಕಿಸಿದರು.

ಗಮನಿಸಿ: ಅಶೋಕಣ್ಣ ನೀವು ಉತ್ತರಿಸಬೇಕಾದ ನಿಜವಾದ ಪ್ರಶ್ನೆಗಳಿವೆ

ಎಸ್. ಬಂಗಾರಪ್ಪ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಬಡವರು ಹಾಗೂ ಹಿಂದುಳಿದವರ ಬಗ್ಗೆ ಕಾಳಜಿ ಹೊಂದಿದ್ದರು. ರಾಜಕೀಯವಾಗಿ ಬೇರೆ ಪಕ್ಷದಲ್ಲಿದ್ದರೂ ಅವರ ಬೇರೆಯವರಿಗೆ ಗೌರವ ಕೊಡುತ್ತಿದ್ದರು. ನಾವು ಕೂಡ ಅಷ್ಟೇ ಗೌರವದಿಂದ ಕಾರಣುತ್ತಿದ್ದೇವು. ಆದರೆ ನೀವು ಮಧು ಬಂಗಾರಪ್ಪ ಅಷ್ಟೇ, ಬಂಗಾರಪ್ಪ ಅಲ್ಲ. ಬಂಗಾರಪ್ಪ ಆಗಲು ನಿಮ್ಮಲ್ಲಿ ಆ ಸಾಮರ್ಥ್ಯ ಇಲ್ಲ. ನೀವು ಅಷ್ಟು ಸಾಧನೆಯನ್ನು ಮಾಡಿಲ್ಲ. ಅವರ ಗುಣವು ನಿಮ್ಮಲ್ಲಿಲ್ಲ. ಅಪ್ಪ ಹೆಸರೇಳಿ ರಾಜಕಾತಣ ಮಾಡುವುದು ಬೇಡ. ಹಾಗಾಗಿ ನೀವು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಹೆಸರಿನ ಪ್ರಭಾವದಿಂದ ಹೊರಬಂದು ತಮ್ಮದೇ ರಾಜಕೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments