Homeದೇಶ48 ಗಂಟೆಗಳಲ್ಲಿ ರಾಜೀನಾಮೆ ನೀಡದಿದ್ದರೆ “ಜಂತರ್ ಮಂತರ್-2” ಮಾದರಿ ಪ್ರತಿಭಟನೆ

48 ಗಂಟೆಗಳಲ್ಲಿ ರಾಜೀನಾಮೆ ನೀಡದಿದ್ದರೆ “ಜಂತರ್ ಮಂತರ್-2” ಮಾದರಿ ಪ್ರತಿಭಟನೆ

Spread the love

ದೆಹಲಿ.ಸೆ.24: 48 ಗಂಟೆಗಳಲ್ಲಿ ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತ ಹುದ್ದೆಗೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ‘ಜಂತರ್ ಮಂತರ್-2’ ಮಾದರಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿ ಮಾತನಾಡಿ, ದೇಶಾದ್ಯಂತ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ಕುರಿತು ಭಾರತೀಯ ಚುನಾವಣಾ ಆಯೋಗ ಕೈಗೊಂಡ ನಿರ್ಧಾರಗಳ ಬಗ್ಗೆ ಇಬ್ಬರು ಚುನಾವಣಾ ಆಯುಕ್ತರು ಆಕ್ಷೇಪಣೆ ವ್ಯಕ್ತಪಡಿಸಿದ್ದರು ಇದರ ಸಂಬಂಧಿಸಿದಂತೆ ‘ದಿ ಇಂಡಿಯನ್ ಎಕ್ಸ್ಪ್ರೆಸ್’ ಪತ್ರಿಕೆಯು ಬುಧವಾರ ಮತ್ತು ಗುರುವಾರ ತನಿಖಾ ವರದಿ ಪ್ರಕಟಿಸಿದ್ದು, ಇದರಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವೆ ಶಾಮೀಲಾಗಿದೆ ಎಂದು ತಿಳಿದು ಬಂದಿದೆ ಎಂದರು.

ಗಮನಿಸಿ: ಪತ್ನಿಯ ಶೀಲ ಶಂಕಿಸಿ ಬರ್ಬರ ಕೊಲೆ- ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರದಿAದ ಬಿಜೆಪಿಯ ಮತಗಳಿಕೆ ಪ್ರಮಾಣ ಹೆಚ್ಚಾಗಿದ್ದು, ಇದು ಕೇವಲ ಮತದಾರರಿಗೆ ಮಾತ್ರ ಸೀಮಿತವಾಗಿದೆ ಸ್ವತಃ ಚುನಾವಣಾ ಆಯೋಗದ ಸದಸ್ಯರಲ್ಲೂ ಕೂಡ ಭಿನ್ನಾಭಿಪ್ರಾಯಗಳು ಉಂಟು ಮಾಡಿದೆ. ಆಯುಕ್ತರ ನಡವಳಿಕೆ ನೋಡಿದರೆ ಬಿಜೆಪಿಯ ಮುಖ ಅವರೇ ಆಗಿದ್ದರೆ ಹೊರತು ಪ್ರಧಾನಿ ಮೋದಿಯಲ್ಲ ಎಂಬುದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸಿಜೆಪಿ ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದು, ಜ್ಷಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು. ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು, ಇವರಿಗೆ ಇಂತಹ ಕಾನೂನು ಬಾಹಿರ ಕ್ರಮ ಕೈಗೊಳ್ಳಲು ಆದೇಶ ನೀಡಿದವರು ಯಾರೆಂಬುದು ಬಹಿರಂಗ ಪಡೆಸಬೇಕು.

ಮುಂಬರುವ ಎಲ್ಲಾ ಚುನಾವಣೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಎಸ್‌ಐಆರ್‌ನ ಸಂಪೂರ್ಣ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಹಾಗೂ ಅದನ್ನು ಪರಿಶೀಲಿಸಲು ಸ್ವತಂತ್ರ ತನಿಖಾ ಆಯೋಗವನ್ನು ರಚಿಸಬೇಕು.
ಸಾರ್ವಜನಿಕ ವಿಶ್ವಾಸವನ್ನು ಮೂಡಿಸುವ ರೀತಿಯಲ್ಲಿ ಚುನಾವಣಾ ಆಯೋಗವನ್ನು ಪುನರ್ ರಚಿಸಲು ಹೊಸ ಕಾನೂನನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಸಹೋದ್ಯೋಗಿಗಳಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಕೂಡ ಇದ್ದರು;

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments