Homeರಾಜ್ಯಎರಡನೇ ಬಾರಿಗೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ

ಎರಡನೇ ಬಾರಿಗೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ

Spread the love

ಎರಡನೇ ಬಾರಿಗೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮಾಜಿ ನಗರಸಭಾ ಅಧ್ಯಕ್ಷ ಬಿ.ಎ ರಮೇಶ್ ಹೆಗ್ಡೆ ಮರುನೇಮಕಗೊಂಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿಗೆ ಅಧ್ಯಕ್ಷರುಗಳನ್ನು ನೇಮಿಸಿ ಅಖಿಲಭಾರತ ಕಾಂಗ್ರೇಸ್ ಸಮಿತಿ (ಎಐಸಿಸಿ)ಯ ಪ್ರಧಾನಕಾರ್ಯದರ್ಶಿ ಬಿ.ಸಿ ವೇಣುಗೋಪಾಲ್ ಅವರು ಪಟ್ಟಿಬಿಡುಗಡೆ ಮಾಡಿದ್ದು , ಹಾಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಬಿ.ಎ ರಮೇಶ್ ಹೆಗ್ಡೆ ಅವರನ್ನು ಎರಡನೇ ಅವಧಿಗೂ ಮುಂದುವರೆಸಿದ್ದಾರೆ.

ಪಕ್ಷದ ತತ್ವ ಸಿದ್ದಾಂತ ಮತ್ತು ಕಾಂಗ್ರೆಸ್ ಸರ್ಕಾರಗಳ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ, ಮತ್ತು ಗಟ್ಟಿಯಾಗಿ ಪ್ರತಿಪಾದಿಸುವಲ್ಲಿ ರಮೇಶ್ ಹೆಗ್ಡೆ ಬದ್ದತೆಯಿಂದ ಕೆಲಸ ಮಾಡುತ್ತಿದ್ದಾರೆ.ಹಿಂದಿನ ಶಿವಮೊಗ್ಗ ನಗರಸಭೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುವ ರಮೇಶ್ ಹೆಗ್ಡೆ ಅವರ ಪಕ್ಷ ನಿಷ್ಠೆ, ಸೈದ್ದಾಂತಿಕ ಸ್ಪಷ್ಟತೆಯನ್ನು ಮನಗಂಡು ಎಐಸಿಸಿ ಎರಡನೇ ಅವಧಿಗೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮುಂದುವರೆಸಿ ಆದೇಶ ಹೊರಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments